October 15, 2026
Thursday, October 15, 2026
spot_img

ಮಹಾರಾಷ್ಟ್ರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಸ್ಥಳದಲ್ಲಿಯೇ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಇನ್ನು ಕಟ್ಟಡದ ಅವಶೇಷಗಳ ನಡುವೆ ಹಲವಾರು ಮಂದಿ ಸಿಲುಕಿರುವ ಶಂಕೆ ವ್ಯಕ್ಥವಾಗಿದೆ. ಈಗಾಗಲೇ ಸ್ಥಳಕ್ಕೆ ಎನ್‌ಡಿಆರ್‌ಎಫ್‌ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯ ಜಾರಿಯಲ್ಲಿದೆ. ಬೃಹತ್‌ ಕಟ್ಟಡ ಇದ್ದಕ್ಕಿದ್ದಂತೆಯೇ ಕುಸಿದುಬಿದ್ದ ಕಾರಣ ಎಲ್ಲೆಡೆ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬರೀ ಒಬ್ಬ ವ್ಯಕ್ತಿಯಷ್ಟೇ ಇರೋದಕ್ಕೆ ಸಾಧ್ಯವಿಲ್ಲ. ಇನ್ನೂ ಹೆಚ್ಚು ಮಂದಿ ಅವಶೇಷಗಳ ಅಡಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಅನ್ವಯ ಹತ್ತು ಮಂದಿ ಸಿಲುಕಿದ್ದಾರೆ.

ಮಾಹಿತಿ ಪಡೆದಿರುವ ಭಿವಂಡಿ ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಹಾಗೂ ಎನ್‌ಡಿಆರ್‌ಎಫ್‌ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಸಿಲುಕಿದವರನ್ನ ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಗಾಯಗೊಂಡವರನ್ನ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ.

ಸ್ಥಳದಲ್ಲಿ ಪೊಲೀಸರ ಬಿಗಿ ಬಂದೋಬಸ್ತ್‌ ನಿಯೋಜಿಸಲಾಗಿದೆ. ಸ್ಥಳೀಯರು ವದಂತಿಗಳಿಗೆ ಕಿವಿಗೊಡದೇ ರಕ್ಷಣಾ ಕಾರ್ಯಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಗಾಯಗೊಂಡವರು ಅಥವಾ ಸಾವುನೋವುಗಳ ಸಂಖ್ಯೆಯ ಕುರಿತು ಅಧಿಕೃತ ವಿವರ ಇನ್ನಷ್ಟೇ ಹೊರಬರಬೇಕಿದೆ.

Must Read