ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಭಾರತದ ಗಡಿಯೊಳಗೆ ಪ್ರವೇಶಿಸಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ಈ ಕುರಿತು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ‘ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್‌ನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಿಂದ ನಮ್ಮ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಜೂನ್‌ 16ರಂದು ಕುಪ್ವಾರ ಜಿಲ್ಲೆಯ ಜಮ್‌ಗುಂಡ್‌ನಲ್ಲಿ ಎಲ್‌ಒಸಿಯಾದ್ಯಂತ ನುಸುಳುವ ಪ್ರಯತ್ನದಲ್ಲಿ ಐವರು ವಿದೇಶಿ ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಭದ್ರತಾ ಪಡೆಗಳು ವಿಫಲಗೊಳಿಸಿದ ಈ ತಿಂಗಳಲ್ಲಿ ಇದು ಎರಡನೇ ಪ್ರಮುಖ ಒಳನುಸುಳುವಿಕೆ ಪ್ರಯತ್ನವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಇನ್ನು ಈ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!