ಹೊಸ ವರ್ಷಾಚರಣೆಗೆ 4 ಸಾವಿರ ಸಿಸಿ ಕ್ಯಾಮೆರಾ ಕಣ್ಗಾವಲು: ಸಚಿವ ಆರಗ ಜ್ಞಾನೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಮನೆಮಾಡಲಿದ್ದು, ಈ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಇರಲಿದೆ ನಾಲ್ಕು ಸಾವಿರ ಕ್ಯಾಮರಾ ಅಳವಡಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಸಭೆ ನಡೆಸಿದರು.ಬಳಿಕ ಮಾತನಾಡಿದ ಅವರು, ಕೊರೋನಾದಿಂದ ಕಳೆದ ಎರಡು ವರ್ಷಗಳಿಂದ ಹೊಸ ವರ್ಷಾಚರಣೆ ಮಾಡಲು ಸಾಧ್ಯವಾಗಲಿಲ್ಲ. ಈ ವರ್ಷ ಜೋರಾಗಿ ಮಾಡುವ ಸಾದ್ಯತೆ ಇದೆ. ಮಾದಕ ವಸ್ತುಗಳನ್ನು ಸೇವನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನುಮತಿ ಪಡೆಯದೆ ಕ್ಲಬ್, ಪಬ್ ಮತ್ತು ಕ್ಯಾಬರೆಗಳನ್ನು ತೆಗೆದರೇ ಮುಚ್ಚಲೇಬೇಕು ಎಂದು ಸೂಚಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!