ಮಹಾರಾಷ್ಟ್ರ: ಶಾಲೆ ಕಾಂಪೌಂಡ್ ಗೋಡೆ ಕುಸಿದು 4 ವರ್ಷದ ಮಗು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಶಾಲೆಯ ಕಾಂಪೌಂಡ್ ಗೋಡೆಯ ಅಮೃತಶಿಲೆಯ ಚಪ್ಪಡಿ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತ ಮಗುವನ್ನು ಆನಂದ್ ಕುಶ್ವಾಹ ಎಂದು ಗುರುತಿಸಲಾಗಿದ್ದು, ಈ ವೇಳೆ ತಾವ್ರೆ ಕಂಪೌಂಡ್ ಪ್ರದೇಶದ ಶಾಲೆಯ ಬಳಿ ಆಟವಾಡುತ್ತಿದ್ದ ಎಂದು ಅವರು ತಿಳಿಸಿದ್ದಾರೆ. ಹತ್ತಿರದ ಆಸ್ಪತ್ರೆಗೆ ಕರೆದೊಯ್ದಾಗ ಆತ ಮೃತಪಟ್ಟಿದ್ದಾನೆ ಎಂದು ವೈದ್ಎಂಯರು ಹೇಳಿದ್ದುದಾರೆ. ಮಗು ಮತ್ತು ಅವರ ಕುಟುಂಬವು ಕೇವಲ ಒಂಬತ್ತು ವಾರಗಳ ಹಿಂದೆ ಈ ಪ್ರದೇಶದಲ್ಲಿ ವಾಸಿಸಲು ಬಂದಿತ್ತು ಎಂದು ಅಧಿಕಾರಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!