ಹೊಸದಿಗಂತ ಡಿಜಿಟಲ್ ಡೆಸ್ಕ್:
40% ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಹಾಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 6000 ಪುಟಗಳ ದಾಖಲೆಯನ್ನು ಸಲ್ಲಿಸಿದ್ದಾರೆ.
ನಿವೃತ್ತ ನ್ಯಾ.ಹೆಚ್.ಎಸ್.ನಾಗಮೋಹನ್ ದಾಸ್ ಸಮಿತಿಗೆ ದಾಖಲೆಪತ್ರ, ಆಡಿಯೋ, ವಿಡಿಯೋ ದಾಖಲೆಗಳನ್ನು ಸಲ್ಲಿಸಿದರು.
ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಸರ್ಕಾರ, ಹಾಲಿ ಸರ್ಕಾರದ ವಿರುದ್ಧ ದಾಖಲೆಗಳನ್ನ ಸಲ್ಲಿಸಿದ್ದೇನೆ. ಎಲ್ಲಾ ಇಲಾಖೆಯ ಕಾಮಗಾರಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಿದ್ದೇನೆ. ಎಲ್ಲಾ ಜಿಲ್ಲೆಗಳ ಕಾಮಗಾರಿ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.