40% ಕಮಿಷನ್ ಆರೋಪ: ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್ ಜಾರಿ  

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ ಬಿಜೆಪಿಗೆ 40 ಪರ್ಸೆಂಟ್‌ ಕಮಿಷನ್ (40 percent commission) ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ(siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ (DK Shivakumar) ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಏಪ್ರಿಲ್ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೆ, ರಾಹುಲ್ ಗಾಂಧಿಗೆ ಜೂನ್ 1ಕ್ಕೆ ಹಾಜರಾಗಲು ಸೂಚಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕೋರ್ಟ್‌ ಪೊಲೀಸರಿಗೆ ಸೂಚನೆ ನೀಡಿದೆ. ಡಿಸಿಎಂಗೆ ಸಮನ್ಸ್ ಜಾರಿ ಮಾಡಲು ಸದಾಶಿವನಗರ ಪೊಲೀಸರಿಗೆ ಸೂಚನೆ ನೀಡಿದರೆ, ಸಿಎಂಗೆ ಸಮನ್ಸ್ ಜಾರಿ ಮಾಡಲು ಹೈಗ್ರೌಂಡ್ಸ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ಕೋರ್ಟ್‌ಗೆ ಪರ ವಕೀಲರು ಅರ್ಜಿ ಸಲ್ಲಿಸಿದರು. ಹೀಗಾಗಿ ರಾಹುಲ್ ಗಾಂಧಿ ಅವರು ಜೂನ್ 1ರಂದು ಕೋರ್ಟ್‌ಗೆ ಹಾಜರಾಗುವಂತೆ ನ್ಯಾ.ಜೆ. ಪ್ರೀತ್ ಅವರು ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!