ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಜಾಹೀರಾತು ಆರೋಪ: ಸಿಎಂ, ಡಿಸಿಎಂಗೆ ಬಿಗ್ ರಿಲೀಫ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಶೇ.40ರಷ್ಟು ಭ್ರಷ್ಟಾಚಾರದ ದೂರನ್ನು ಪ್ರಕಟಿಸಿದ್ದಕ್ಕಾಗಿ ಕಾನೂನು ಕ್ರಮ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇಬ್ಬರಿಗೂ ಜಾಮೀನು ಮಂಜೂರಾಗಿದೆ.

ಬಿಜೆಪಿ ಸರ್ಕಾರ ಶೇ.40ರಷ್ಟು ಕಮಿಷನ್ ತೆಗೆದುಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಾಹೀರಾತು ಬಿಡುಗಡೆ ಮಾಡಿತ್ತು. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಬಿಜೆಪಿ ಪ್ರಕರಣದ ಹಿನ್ನೆಲೆ ಇಂದು ಸಿಎಂ ಮತ್ತು ಡಿಸಿಎಂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಚುನಾವಣೆ ವೇಳೆ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!