ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಆಗ್ರಾದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಫಲವಾಗಿ 40 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ.
ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಆಗ್ರಾದಲ್ಲಿರುವ ಶೂ ವ್ಯಾಪಾರಿ ರಾಮನಾಥ್ ಡಂಗ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ದಾಖಲೆ ಇಲ್ಲದ 500 ರೂ. ನೋಟುಗಳ ಹಲವು ಬಂಡಲ್‌ಗಳನ್ನು ಹೊರತೆಗೆಯಲಾಗಿದೆ.
ಪ್ರಸ್ತುತ 40 ಕೋಟಿ ರೂ. ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಪ್ತಿ ಮಾಡಿರುವ ಹಣದ ಎಣಿಕೆ ನಡೆಯುತ್ತಿದ್ದು, ಹಣದ ಪೂರೈಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.