ಹೊಸದಿಗಂತ ಡಿಜಿಟಲ್ ಡೆಸ್ಕ್:
ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.
ದೇಶದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾಗಿರುವ ಲಸಲ್ಗಾಂವ್ನಲ್ಲಿ ಸಾಮಾನ್ಯ ಈರುಳ್ಳಿಯ ಸಗಟು ಬೆಲೆ ಕ್ವಿಂಟಲ್‌ಗೆ 1,800 ರೂ. ಇದರಿಂದ ಈರುಳ್ಳಿ ಬೆಲೆ ಶೇ.40ರಷ್ಟು ಏರಿಕೆಯಾಗಿದೆ. ಫೆ.17ರಂದು ಕ್ವಿಂಟಲ್‌ಗೆ 1,280 ರೂ.ಗಳಷ್ಟಿದ್ದ ಈರುಳ್ಳಿ ಬೆಲೆ ಕೇವಲ ಮೂರು ದಿನಗಳಲ್ಲಿ 520 ರೂ. ಏರಿಕೆಯಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 500 ರೂಪಾಯಿ ದಾಟಿದೆ. ಮಹಾರಾಷ್ಟ್ರದಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 600 ರೂ. ರಾಜ್ಯದಲ್ಲಿ ಬೆಳ್ಳುಳ್ಳಿ ಬೆಲೆಯೂ 540 ರೂಪಾಯಿ ಇದ್ದು, ಗ್ರಾಹಕರು ಕಂಗಾಲಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಬಿತ್ತನೆ ದರ ಕಡಿಮೆಯಾದ ಕಾರಣ ಬೆಳ್ಳುಳ್ಳಿ ಉತ್ಪಾದನೆ ತೀವ್ರವಾಗಿ ಕುಸಿದಿದ್ದು, ಹೀಗಾಗಿ ಬೆಲೆ ಏರಿಕೆ ಕಂಡಿದೆ.