ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಣಿಕರನ್ನು ಹೊತ್ತು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ನಿದ್ರೆಗೆ ಜಾರಿದ್ದ 40 ಮಂದಿ ಗಾಯಗೊಂಡಿರುವ ಘಟನೆ ಗುಜರಾತ್‌ನಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಲಖ್ತರ್ ತಾಲೂಕಿನ ವಾನಾ ಗ್ರಾಮದ ಬಳಿ ರಾತ್ರಿ 12:15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ದಿಯೋದರ್‌ನಿಂದ ಜುನಾಗಢಕ್ಕೆ 55 ರಿಂದ 60 ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರ ಪರಿಣಾಮ ಬಸ್‌ನಲ್ಲಿ ನಿದ್ರಿಸುತ್ತಿದ್ದ 40 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳ ಪೈಕಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.