ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ:40 ಮಂದಿ ಸಾವು, 78 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 40 ಜನರು ಪ್ರಾಣ ಕಳೆದುಕೊಂಡಿದ್ದು, ಇನ್ನೂ 78 ಜನರು ಗಾಯಗೊಂಡಿದ್ದಾರೆ. ಸೆನೆಗಲ್ ಅಧ್ಯಕ್ಷ ಮ್ಯಾಕಿ ಸಾಲ್ ಅವರು ಈ ಭೀಕರ ಅಪಘಾತದ ಬಗ್ಗೆ ಟ್ವೀಟ್‌ನಲ್ಲಿ ವಿವರಗಳನ್ನು ನೀಡಿದ್ದಾರೆ. ಕಾಫಿನ್ ಪ್ರದೇಶದ ಗ್ನಿಬಿ ಗ್ರಾಮದಲ್ಲಿ ಈ ಬಸ್ ಅಪಘಾತ ಸಂಭವಿಸಿದೆ ಎಂದು ಹೇಳಿದರು.

ಗ್ನಿಬಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 40 ಜನರ ಜೀವಹಾನಿಯಾಗಿರುವುದು ಆಘಾತಕಾರಿಯಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಮ್ಯಾಕಿ ಸಾಲ್ ಟ್ವೀಟ್‌ ಮಾಡಿದ್ದಾರೆ. ದೇಶದಲ್ಲಿ ನಾಲ್ಕು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ.

ಸದ್ಯದಲ್ಲೇ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿ ರಸ್ತೆ ಅಪಘಾತ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದರು. ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಚೀಖ್ ಡಿಯೆಂಗ್, ರಾಷ್ಟ್ರೀಯ ರಸ್ತೆ ಸಂಖ್ಯೆ 1 ರಲ್ಲಿ ಈ ಬಸ್ ಅಪಘಾತ ಸಂಭವಿಸಿದೆ ಎಂದು ವಿವರಿಸಿದರು.

ರಸ್ತೆಯಲ್ಲಿದ್ದ ಬಸ್‌ನ ಟೈರ್‌ ಪಂಕ್ಚರ್‌ ಆಗಿ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. 78 ಮಂದಿ ಗಾಯಗೊಂಡಿದ್ದಾರೆ ಎಂದು ವಿವರಿಸಿದರು. ಏತನ್ಮಧ್ಯೆ, ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ರಸ್ತೆ ಅಪಘಾತಗಳು ಪದೇ ಪದೇ ಸಂಭವಿಸುತ್ತವೆ. ಅದಕ್ಕೆ ರಸ್ತೆಗಳ ದುಸ್ಥಿತಿ ಒಂದು ಕಾರಣವಾದರೆ, ಚಾಲಕರು ನಿಯಮ ಪಾಲಿಸದೆ ವಾಹನ ಚಲಾಯಿಸುತ್ತಿರುವುದು ಇನ್ನೊಂದು ಕಾರಣ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!