ದಿಗಂತ ವರದಿ ವಿಜಯಪುರ:
ಪೊಲೀಸ್ ಠಾಣೆಯಲ್ಲಿ 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಪೇದೆಗಳಿಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಇಲ್ಲಿನ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಇಲ್ಲಿನ ಹನುಮಂತ ಪೂಜಾರಿ ಹಾಗೂ ಜಟ್ಟೆಪ್ಪ ಬಿರಾದಾರ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ.
ಹನುಮಂತ ಪೂಜಾರಿ ಹಾಗೂ ಜಟ್ಟೆಪ್ಪ ಬಿರಾದಾರ ಈ ಆರೋಪಿಗಳು, ಗಲಾಟೆ ವಿಷಯಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡುವ ವಿಚಾರದಲ್ಲಿ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ, ಡಿವೈಎಸ್ಪಿ ಸುರೇಶ ರೆಡ್ಡಿ ಇನ್ಸೆಕ್ಟರ್ ಆನಂದ ಠಕ್ಕನವರ, ಎ.ಎ. ಡೋಣಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ