spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆನ್‌ಲೈನ್‌ ಗೇಮ್‌ನಲ್ಲಿ 40 ಸಾವಿರ ರೂ. ಕಳೆದುಕೊಂಡ ಬಾಲಕ: ಮುಂದೆ ನಡೆದಿದ್ದು ದುರಂತ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

6ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಆನ್ ಕೈನ್ ಗೇಮ್ ನಲ್ಲಿ 40 ಸಾವಿರ ರೂ. ಕಳೆದುಕೊಂಡಿದ್ದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದುರ್ಘಟನೆ ಛತ್ತಾರ್‌ಪುರ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೂ ಮುನ್ನ ಈ ಬಾಲಕ ಫ್ರೀ ಫೈರ್‌ ಗೇಮ್‌ ಆಡುವುದಕ್ಕಾಗಿ 40 ಸಾವಿರ ರೂ. ವ್ಯರ್ಥ ಮಾಡಿರುವುದಾಗಿ, ತನ್ನನ್ನು ಕ್ಷಮಿಸುವಂತೆ ತಾಯಿಯಲ್ಲಿ ಕ್ಷಮೆ ಕೋರಿ ಪತ್ರ ಬರೆದಿದ್ದಾನೆ.

ಈತನ ತಂದೆ ಪ್ಯಾಥಾಲಜಿ ಲ್ಯಾಬ್ ನಡೆಸುತ್ತಿದ್ದಾರೆ. ತಾಯಿ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಾರೆ. ತಾಯಿ ಖಾತೆಯಿಂದ ಗೇಮ್ ಆಡುವುದಕ್ಕಾಗಿ ಈ ಬಾಲಕ 40 ಸಾವಿರ ಹಣ ಪಡೆದುಕೊಂಡಿದ್ದಾನೆ. ಈ ವಿಷಯ ಗೊತ್ತಾಗಿ ತಾಯಿ ಮಗನನ್ನು ಗದರಿದ್ದಾರೆ. ಇದರಿಂದ ಬೇಸರಗೊಂಡ ಬಾಲಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss