ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ.
ಸಕಲೇಶಪುರ ದೊಡ್ಡ ತೊಬ್ಲು ಬಳಿ ಭಾರೀ ಭೂಕುಸಿತ ಸಂಭವಿಸಿದ್ದು, ವಾಹನಗಳು ಸಿಕ್ಕಿಹಾಕಿಕೊಂಡಿವೆ. ಸದ್ಯಕ್ಕೆ ಈ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.
ಮಣ್ಣಿನಲ್ಲಿ ಅರ್ಧ ಮುಳುಗಿರುವ ವಾಹನಗಳನ್ನು ತೆರವು ಮಾಡುವ ಪ್ರಯತ್ನ ಜಾರಿಯಲ್ಲಿದೆ. ಯಾವುದೇ ರೀತಿಯ ಪ್ರಾಣಹಾನಿ ಆಗಿಲ್ಲ.