ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಿಂದ 41 ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಮಾಡಿರುವುದು ಅಂತಾರಾಷ್ಟ್ರೀಯ ನಿಯಮಗಳ ಉಲ್ಲಂಘನೆ ಎಂಬಂತೆ ಬಿಂಬಿಸುವ ಹೊರಟ ಕೆನಡಾ ವಿರುದ್ಧ ಭಾರತ ಖಂಡನೆ ವ್ಯಕ್ತಪಡಿಸಿದೆ.
ಈ ಕುರಿತು ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ರಾಜತಾಂತ್ರಿಕ ಸಿಬ್ಬಂದಿ ಸಂಖ್ಯೆ ವಿಷಯದಲ್ಲಿ ಸಮಾನತೆಯನ್ನು ಖಾತ್ರಿಪಡಿಸುವುದಕ್ಕಾಗಿ ಕೈಗೊಂಡಿರುವ ಕ್ರಮವು, ರಾಜತಾಂತ್ರಿಕ ಸಂಬಂಧಗಳ ಕುರಿತ ವಿಯೆನ್ನಾ ಒಪ್ಪಂದಕ್ಕೆ ಅನುಗುಣವಾಗಿಯೇ ಇದೆ ಎಂದುಹೇಳಿದೆ.
ತನ್ನ ರಾಜತಾಂತ್ರಿಕ ಅಧಿಕಾರಿಗಳನ್ನು ಹಿಂದಕ್ಕೆ ಕರೆಸಿಕೊಂಡ ನಂತರ ಮಾತನಾಡಿದ್ದ ಕೆನಡಾ ವಿದೇಶಾಂಗ ಸಚಿವೆ ಮೆಲಾನಿ ಜೋಲಿ, ‘ಭಾರತದ ನಡೆಯು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾದುದು ಹಾಗೂ ವಿಯೆನ್ನಾ ಒಪ್ಪಂದದ ಉಲ್ಲಂಘನೆ’ ಎಂದು ಹೇಳಿದ್ದರು.
ಈ ವಿಚಾರದಲ್ಲಿ ಭಾರತ ಕೈಗೊಂಡ ಕ್ರಮವು ವಿಯೆನ್ನಾ ಒಪ್ಪಂದದ 11.1ನೇ ವಿಧಿಗೆ ಅನುಗುಣವಾಗಿಯೇ ಇದೆ ಎಂದೂ ಸಚಿವಾಲಯ ಹೇಳಿದೆ.