Thursday, August 11, 2022

Latest Posts

ಕೊರೋನಾದಿಂದ ಕೇರಳದಲ್ಲಿ 41 ಗರ್ಭಿಣಿಯರ ಸಾವು, 149 ಮಂದಿ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ಕೊರೋನಾದಿಂದಾಗಿ ಇಲ್ಲಿವರೆಗೆ 41 ಗರ್ಭಿಣಿಯರು ಮೃತಪಟ್ಟಿದ್ದಾರೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಬುಧವಾರ ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಟಿ.ಜೆ. ವಿನೋದ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೋವಿಡ್‌ ದೃಢಪಟ್ಟವರಲ್ಲಿ 149 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದರು.
ಕಾಂಗ್ರೆಸ್‌ನ ಮ್ಯಾಥ್ಯೂ ಕುಜಲನಾಡನ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ‘ವರದಿಗಳ ಪ್ರಕಾರ, ರಾಜ್ಯ ಆರೋಗ್ಯ ಇಲಾಖೆಯು ಇತ್ತೀಚೆಗೆ ನಡೆಸಿದ ಸೆರೊ ಪ್ರೈವೆಲೆನ್ಸ್ ವೈಜ್ಞಾನಿಕ ಅಧ್ಯಯನದ ಸಂಶೋಧನೆಗಳು ಮತ್ತು ಐಸಿಎಂಆರ್‌ನ ಇಂಥದ್ದೇ ಸಮೀಕ್ಷೆಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss