Sunday, August 14, 2022

Latest Posts

5,324 ಹೊಸ ಪ್ರಕರಣ: 1,847 ಸೋಂಕಿತರು ಗುಣಮುಖ, 75 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು 5,324 ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.
ಸೋಮವಾರ ಒಂದೇ ದಿನ ಬರೋಬ್ಬರಿ 75 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,953ಕ್ಕೆ ಏರಿಕೆಯಾಗಿದೆ.
ಇಂದು 1,847 ಕೊರೊನಾ ಸೋಂಕಿತರು ಗುಣಮುಖರಾಗಿದ್ದು. ಇದುವರೆಗೆ 37,685 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಕೊರೊನಾ ಸೋಂಕಿತರ 61,819 ಆಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss