ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಭಾರತದಲ್ಲಿ ವರುಣನ ರೌದ್ರಾವತಾರಕ್ಕೆ ಈವರೆಗೂ 42 ಮಂದಿ ಬಲಿಯಾಗಿದ್ದಾರೆ.
ಹಿಮಾಚಲ ಪ್ರದೇಶ, ದೆಹಲಿ ಹಾಗೂ ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸಾಕಷ್ಟು ಮನೆಗಳು ಕೊಚ್ಚಿಹೋಗಿವೆ.
ಯಮುನಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ದೆಹಲಿ, ಉತ್ತರ ಪ್ರದೇಶ ಹಾಗೂ ಹಿಮಾಚಲ ಪ್ರದೇಶದ ಕೆಲ ಭಾಗಗಳಲ್ಲಿ ಪ್ರದೇಶಗಳು ಜಲಾವೃತವಾಗಿವೆ, ಇನ್ನು ಮಳೆಯಿಂದಾಗಿ ಅಪಾರ ಪ್ರಮಾಣದ ಆಸ್ತಿ ಹಾಗೂ ಜೀವ ನಷ್ಟವಾಗಿದೆ.
ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ಹಾಗೂ ದೆಹಲಿಯಲ್ಲಿ ಸುರಿದ ಏಕಾಏಕಿ ಮಳೆ ಮಂಗಳವಾರ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಈಶಾನ್ಯ ಭಾರತ ಹಾಗೂ ಪೂರ್ವ ಭಾರತದ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಳೆ ಹಾಗೂ ಭೂಕುಸಿತದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ-೪೪ನ್ನು ಮುಚ್ಚಲಾಗಿದೆ. ಭಾರೀ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ದೆಹಲಿಯಲ್ಲಿ ಮಳೆಯಿಂದಾಗಿ ಇಂದು ಕೂಡ ಶಾಲೆಗಳನ್ನು ಮುಚ್ಚಲಾಗಿದೆ.
ಪ್ರತೀ ವರ್ಷ ಮಳೆಗಾಲದಲ್ಲಿಯೂ ಪ್ರಕೃತಿಯ ಕೋಪಕ್ಕೆ ತುತ್ತಾಗುತ್ತವೇ, ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಸುರಕ್ಷಾ ಕ್ರಮಗಳನ್ನು ಕೈಗೊಂಡು ಸದಾ ಅಲರ್ಟ್ ಮೋಡ್‌ನಲ್ಲಿ ಇರುತ್ತೇವೆ. ಚಾರ್‌ಧಾಮ್ ಯಾತ್ರಿಗಳ ಸುರಕ್ಷತೆ ಬಗ್ಗೆಯೂ ಕ್ರಮ ಕೈಗೊಂಡಿದ್ದೇವೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.