ರಾಜ್ಯದಲ್ಲಿಂದು 42 ಮಂದಿಗೆ ಕೊರೋನಾ ಪಾಸಿಟಿವ್, 19 ಸೋಂಕಿತರು ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 42 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದೆ. ಬೆಳಗಾವಿಯಲ್ಲಿ 70 ವರ್ಷದ ವೃದ್ಧರೊಬ್ಬರು ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 42 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. 19 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 148 ಇದ್ದು, ರಾಜ್ಯದಲ್ಲಿ ಇದುವರೆಗೂ ಕೊರೊನಗೆ ಬಲಿಯಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 463, ರಾಟ್ ಮೂಲಕ 50 ಸೇರಿದಂತೆ 513 ಜನರನ್ನು ಕೊರೋನಾ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 42 ಜನರಿಗೆ ಪಾಸಿಟಿವ್ ಬಂದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!