ಕೇವಲ 11 ದಿನಗಳಲ್ಲಿ 3.14 ಕೋಟಿ ಮಕ್ಕಳಿಗೆ ಕೋವಿಡ್‌ ಲಸಿಕೆ: ಆರೋಗ್ಯ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಪ್ರಾರಂಭವಾದ 15-18 ವರ್ಷದ ಮಕ್ಕಳ ಲಸಿಕೀಕರಣ ಯಶಸ್ವಿಯಾಗಿ ನಡೆಯುತ್ತಿದ್ದು, ಕೇವಲ 11 ದಿನಗಳಲ್ಲಿ 3.14 ಕೋಟಿಗೂ ಹೆಚ್ಚು ಮಕ್ಕಳು ಲಸಿಕೆ ಪಡೆದಿದ್ದಾರೆ.
ಈ ತಿಂಗಳ ಅಂತ್ಯದೊಳಗೆ ಸರ್ಕಾರ ಶೇ.80ರಿಂದ 85ರಷ್ಟು ಮಕ್ಕಳಿಗೆ ಅಂದ್ರೆ 7.40 ಕೋಟಿ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ. ಈಗಿನ ವರದಿಯಂತೆ 3,14,84,269 ಮಕ್ಕಳು ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಭಾರತದಲ್ಲಿ ಯುವಕರಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಉತ್ಸಾಹವಿದೆ ಎಂದು ಶ್ಲಾಘಿಸಿದ್ದಾರೆ.
ಮಕ್ಕಳಿಗೆ ಲಸಿಕೆ ನೀಡಲು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಲಸಿಕೆ ಮಾತ್ರ ಲಭ್ಯವಿದೆ. ಮಕ್ಕಳಿಗೆ ಲಸಿಕೆ ನೀಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಾಕ್ಸಿನ್‌ನ ಹೆಚ್ಚುವರಿ ಲಸಿಕೆ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!