ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇತ್ತೀಚಗೆ ಸೈಬರ್ ಕ್ರೈಂ ಪ್ರಕರಣಗಳು ಹಾಗೂ ಡೀಪ್ ಫೇಕ್ ಪ್ರಕರಣಗಳು ಹೆಚ್ಚಾಗಿವೆ.
ಹೀಗಾಗಿ ಡೀಪ್‌ಫೇಕ್,ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್ ಸಿಇಎನ್ ಠಾಣೆ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನು ಸುಳ್ಳು ಸುದ್ದಿ ತಡೆಗಟ್ಟಲು ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಸೆಲ್ ರಚನೆ ಮಾಡಲಾಗುವುದು ಎಂದಿದ್ದಾರೆ.