ರಾಜ್ಯದಲ್ಲಿ 24 ಗಂಟೆಗಳಲ್ಲಿ 437 ಡೆಂಗ್ಯೂ ಕೇಸ್‌ ಪತ್ತೆ: ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 437 ಡೆಂಗ್ಯೂ ಕೇಸ್‌ಗಳು ದೃಢವಾಗಿದ್ದು, ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೇರಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 2704 ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 437 ಜನರಿಗೆ ಡೆಂಗ್ಯೂ ದೃಢವಾಗಿದೆ. ಬಿಬಿಎಂಪಿ ವ್ಯಾಪಿಯಲ್ಲಿ 165, ಬೆಂಗಳೂರು ನಗರ 10, ಬೆಂ.ಗ್ರಾಮಾಂತರ 5, ರಾಮನಗರ 14, ಕೋಲಾರ 19, ಚಿಕ್ಕಬಳ್ಳಾಪುರ 7, ತುಮಕೂರು 5, ಚಿತ್ರದುರ್ಗ 3, ದಾವಣಗೆರೆ 24, ಬೆಳಗಾವಿ 32, ಗದಗ 15, ಉತ್ತರ ಕನ್ನಡ 1, ಕಲಬುರಗಿ 20, ಬೀದರ್‌ 10, ಬಳ್ಳಾರಿ 4, ವಿಜಯನಗರ 1, ಕೊಪ್ಪಳ 3, ಮೈಸೂರು 17, ಮಂಡ್ಯ 47, ಹಾಸನ 6, ಉಡುಪಿ 10, ಚಿಕ್ಕಮಗಳೂರು 10, ಕೊಡಗು 9 ಕೇಸ್‌ ಪತ್ತೆಯಾಗಿವೆ.

ರಾಜ್ಯದಲ್ಲಿ ಡೆಂಗ್ಯೂ ಜ್ವರದಿಂದ ಜನವರಿಯಿಂದ ಈವರೆಗೆ ಒಟ್ಟು 8658 ಪ್ರಕರಣಗಳು ವರದಿಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಡೆಂಗ್ಯೂ ಸಾವಿನ ಪ್ರಮಾಣ ಶೇ. 0.07 ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!