Monday, March 27, 2023

Latest Posts

ಪಾಕಿಸ್ತಾನ : ಲಾಸ್ಬೆಲಾದಲ್ಲಿ ಭೀಕರ ಬಸ್ ದುರಂತ ; ಕನಿಷ್ಟ 44 ಜನರ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾನುವಾರ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಲಾಸ್ಬೆಲಾದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಕಂದರಕ್ಕೆ ಉರುಳಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ.

ಭಾನುವಾರ ಬೆಳಗ್ಗೆ ಸಂಭವಿಸಿದ ಈ ದುರಂತವು, ರಾತ್ರಿ ಪ್ರಯಾಣಿಕ ಕೋಚ್ ಕ್ವೆಟ್ಟಾದಿಂದ 48 ಜನರೊಂದಿಗೆ ಕರಾಚಿಗೆ ತೆರಳುತ್ತಿತ್ತು ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ಬಸ್ ನಿಧಾನವಾಗ ಚಲಿಸಲು ಪ್ರಯತ್ನಿಸುವಾಗ ಲಾಸ್ಬೆಲಾದಲ್ಲಿ ಸೇತುವೆಯ ಪಿಲ್ಲರ್‌ಗೆ ಡಿಕ್ಕಿ ಹೊಡೆದ ನಂತರ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಕೋಚ್ ಕಂದರಕ್ಕೆ ಬಿದ್ದಿದೆ, ನಂತರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರದೇಶದ ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಬದುಕುಳಿದವರಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಏರುವ ಭೀತಿಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ, 2018 ರಲ್ಲಿ ಪಾಕಿಸ್ತಾನದ ರಸ್ತೆ ದುರಂತದಲ್ಲಿ 27,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!