ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 443 ಮಂದಿಗೆ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 443 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇದರಲ್ಲಿ 429 ಜನರಿಗೆ ಸಂಪರ್ಕದಿಂದ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 416 ಮಂದಿ ಸೋಂಕುಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 14,424 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಈ ಪೈಕಿ 13,535 ಮಂದಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ರಾಜ್ಯದಲ್ಲಿ 17,994 ಜನರು ಗುಣಮುಖರಾದರು.
ಕೇರಳ ರಾಜ್ಯದ ಜಿಲ್ಲೆಗಳ ಪೈಕಿ ತಿರುವನಂತಪುರ ಜಿಲ್ಲೆಯಲ್ಲಿ 2030, ಕೊಲ್ಲಂ 1605, ಮಲಪ್ಪುರಂ 1597, ಎರ್ನಾಕುಳಂ 1596, ತೃಶೂರು 1359, ಪಾಲಕ್ಕಾಡು 1312, ಕಲ್ಲಿಕೋಟೆ 1008, ಆಲಪ್ಪುಳ 848, ಕಣ್ಣೂರು 750, ಇಡುಕ್ಕಿ 673, ಕೋಟ್ಟಾಯಂ 580, ಕಾಸರಗೋಡು 443, ಪತ್ತನಂತ್ತಿಟ್ಟ 429, ವಯನಾಡು ಜಿಲ್ಲೆಯಲ್ಲಿ 194 ಜನರಿಗೆ ಕೋವಿಡ್ ವೈರಸ್ ದೃಢಪಡಿಸಲಾಗಿದೆ. ಈ ಮಧ್ಯೆ ಕೊರೋನಾ ಸೋಂಕು ಬಾಧಿಸಿ ಕೇರಳದಲ್ಲಿ ಗುರುವಾರ 194 ಮಂದಿ ಅಸುನೀಗಿದರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 10,631 ಜನರು ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss