Sunday, August 14, 2022

Latest Posts

45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಪೂರ್ಣವಾದ ಮೇಲೆ ಉಳಿದವರಿಗೆ ಮೊದಲ ಡೋಸ್: ಡಾ.ಸಿ.ಎನ್. ಅಶ್ವತ್ಥ್ ನಾರಾಯಣ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಶೀಲ್ಡ್ ಮೊದಲ ಡೋಸ್, ಎರಡನೇ ಡೋಸ್ ನಡುವಿನ ಅಂತರವನ್ನು 12ರಿಂದ 16 ವಾರಕ್ಕೆ ಹೆಚ್ಚಿಸಿರುವ ಹಿನ್ನೆಲೆ ಅವಧಿ ಮೀರಿದವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ಕೊಡಬೇಕು ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಬಳಿಕ ಮಾತನಾಡಿದ ಅವರು, ಕೋವಿಶೀಲ್ಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್ ಕರೆಯಲಾಗುತ್ತಿದ್ದು, 2 ಕೋಟಿ ಲಸಿಕೆ ತರಿಸಲು ಚರ್ಚಿಸಲಾಗಿದೆ. ಆಸ್ಪತ್ರೆ ಹೊರತಾಗಿ ಶಾಲಾ-ಕಾಲೇಜುಗಳಲ್ಲೂ ಲಸಿಕೆ ನೀಡಲು ತೀರ್ಮಾನಿಸಲಾಗಿದೆ ಎಂದರು.
45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೊಡಬೇಕೆಂಬುದು ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕೋವ್ಯಾಕ್ಸಿನ್‌ಗೆ 45 ವರ್ಷ ಮೇಲ್ಪಟ್ಟವರಿಗೆ ಎರಡನೆ ಡೋಸ್ ಪೂರ್ಣವಾದ ಮೇಲೆ ಉಳಿದವರಿಗೆ ಮೊದಲ ಡೋಸ್ ಕೊಡಬೇಕು.
18 ವರ್ಷ ಮೇಲ್ಪಟ್ಟವರಿಗೆ ಕೋವಿನ್ ಪೋರ್ಟಲ್ ಜತೆಯಲ್ಲಿ ಪ್ರತ್ಯೇಕ ಆ್ಯಪ್ ರೂಪಿಸಲಾಗುತ್ತಿದೆ. ಆ್ಯಪ್ ರಚನೆ ಪೂರ್ಣಗೊಂಡ ಮೇಲೆ ಲಸಿಕೆ ಅಭಿಯಾನ ಪ್ರಾರಂಭಿಸಲಾಗುತ್ತದೆ. ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ಆಸ್ಪತ್ರೆಯಿಂದ ಹೊರಗೆ ಶಾಲಾ- ಕಾಲೇಜುಗಳ ಆವರಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗುತ್ತಿರುವುದರಿಂದ ಬ್ಲ್ಯಾಕ್ ಫಂಗಸ್ ಗೂ ಇಂಜಕ್ಷನ್ ನೀಡಲು ತೀರ್ಮಾನಿಸಲಾಗಿದ್ದು, 20,000 ವಯಲ್ಸ್ ಗೆ ಕೇಂದ್ರಕ್ಕೆ ಬೆಡಿಕೆ ಇಡಲಾಗುವುದು ಎಂದು ವಿವರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss