ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿಯಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆಂದು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಪಲ್ಟಿಯಾಗಿದ್ದು, 45ಮಕ್ಕಳಿಗೆ ಗಾಯವಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಸವಣೂರು ತಾಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಗಾಯಗೊಂಡ ಸಜ್ಜನಗುಡ್ಡದ ಸರ್ಕಾರಿ ಶಾಲಾ ಮಕ್ಕಳನ್ನು ಸವಣೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ.
ಸರ್ಕಾರಿ ಶಾಲಾ ಮಕ್ಕಳು ರಾಕ್‌ಗಾರ್ಡನ್ ನೋಡಲು ಉತ್ಸಾಹದಿಂದ ಹೊರಟಿದ್ದರು. ಈ ರೀತಿ ಅಪಘಾತವಾಗಿರುವುದರಿಂದ ಪೋಷಕರು ಆತಂಕಕ್ಕೊಳಗಾಗಿದ್ದಾರೆ.