ಹೊಸ ದಿಗಂತ ಆನ್ ಲೈನ್ ಡೆಸ್ಕ್:
ನಿನ್ನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪ್ರದೇಶದ ಲಸಿಕೆ ಕೇಂದ್ರದಲ್ಲಿ ಎರಡನೇ ಡೋಸ್ ಲಸಿಕೆ ಪಡೆದ ಸ್ವಲ್ಪ ಹೊತ್ತಿನ ಬಳಿಕ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಸುಖದೇವ್ ಕಿರ್ದಾತ್ ಮೃತ ವ್ಯಕ್ತಿ. ಈತ ಭಿವಾಂಡಿಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಕನಾಗಿ ಕೆಲಸ ಮಾಡುತ್ತಿದ್ದ. ಲಸಿಕೆ ಪಡೆದ ಕೆಲವೇ ಸಮಯದಲ್ಲಿ ತಲೆಸುತ್ತಿ ಬಿದ್ದಿದ್ದಾರೆ. ಅಸ್ವಸ್ಥರಾದ ಸುಖದೇವ್ ಅವರನ್ನು ಹತ್ತಿರದ ಇಂದಿರಾ ಗಾಂಧಿ ಸ್ಮಾರಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಅಲ್ಲಿ ಅವರು ಮೃತಪಟ್ಟರೆಂದು ವೈದ್ಯರು ಘೋಷಿಸಿದರು.
ಜನವರಿ 28ರಂದು ಕಿರ್ದಾತ್ ಮೊದಲ ಲಸಿಕೆಯನ್ನು ತೆಗೆದುಕೊಂಡಿದ್ದರು. ಅವರ ಮೃತ ದೇಹವನ್ನು ವಿಧಿವಿಜ್ಞಾನ ಪರೀಕ್ಷೆಗೆ ಮುಂಬೈನ ಜೆಜೆ ಆಸ್ಪತ್ರೆಗೆ ವೈದ್ಯರು ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ವೈದ್ಯರು ತಿಳಿಸಿದ್ದಾರೆ.