ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಭಾರತದಲ್ಲಿ ಇದುವರೆಗೆ 45,432 ಮಂದಿಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 21,085 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ, 4,252 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದೆ.
ಈ ಕುರಿತು ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಮಾಹಿತಿ ನೀಡಿದ್ದು, ಒಟ್ಟು ಪ್ರಕರಣಗಳಲ್ಲಿ ಶೇ.84.4ರಷ್ಟು ರೋಗಿಗಳು ಕೊರೋನಾ ಪೀಡಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕಪ್ಪು ಶಿಲೀಂಧ್ರ ಹಾಗೂ ಇತರೆ ಶಿಲೀಂಧ್ರಗಳು ಅವಕಾಶವಾದಿ ಸೋಂಕುಗಳು, ಸಾಮಾನ್ಯವಾಗಿ ಇವು ಮಧುಮೇಹ, ಕ್ಯಾನ್ಸರ್ ಹಿನ್ನೆಲೆಯ ರೋಗಿಗಳು ಹಾಗೂ ಮದ್ಯವ್ಯಸನಿಗಳು ಸೇರಿದಂತೆ ಪ್ರತಿರೋಧ ಶಕ್ತಿಯು ಕಡಿಮೆ ಪ್ರಮಾಣದಲ್ಲಿಇರುವ ರೋಗಿಗಳಲ್ಲಿ ಕಂಡುಬರಲಿದೆ ಎಂದು ಹೇಳಿದ್ದಾರೆ.