ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನ ಗಡಿ ಬಳಿಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪಾಕಿಸ್ತಾನ ಭದ್ರತಾ ಪಡೆಗಳು ಕನಿಷ್ಠ 47 ಭಯೋತ್ಪಾದಕರನ್ನು ಹತ್ಯೆ ಮಾಡಿವೆ ಎಂದು ಪಾಕ್ ಸೇನೆ ಮಾಧ್ಯಮ ವಿಭಾಗ ಶನಿವಾರ ತಿಳಿಸಿದೆ.
ಆಗಸ್ಟ್ 7-8 ರ ಮಧ್ಯರಾತ್ರಿ ಝೋಬ್ ಜಿಲ್ಲೆಯ ಸಂಬಾಜಾದಲ್ಲಿ ಭದ್ರತಾ ಪಡೆಗಳು ಉಗ್ರ ವಿರೋಧಿ ಕಾರ್ಯಾಚರಣೆ ನಡೆಸಿ 33 ಭಯೋತ್ಪಾದಕರನ್ನು ಕೊಂದಿವೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಅಫ್ಘಾನಿಸ್ತಾನ ಗಡಿಯಲ್ಲಿರುವ ಸಂಬಾಜಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಇನ್ನೂ 14 ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ ಎಂದು ಐಎಸ್‌ಪಿಆರ್ ತಿಳಿಸಿದೆ.
ಹತ್ಯೆಗೀಡಾದ ಭಯೋತ್ಪಾದಕರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಐಎಸ್‌ಪಿಆರ್ ಹೇಳಿದೆ.