ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ 4,700 ಕೆ.ಜಿಗೂ ಅಧಿಕ ಪ್ರಮಾಣದ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.
ಅಸ್ಸಾಂ ಪೊಲೀಸರು ಸೋಮವಾರ ಚುರೈಬರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಯಮಿತ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ತ್ರಿಪುರಾದಿಂದ ಅಸ್ಸಾಂಗೆ ಬರುತ್ತಿದ್ದ ಟ್ರಕ್‌ಅನ್ನು ಪೆರಿಶೀನಿಸಿದ್ದಾರೆ. ಈ ವೇಳೆ ಮಾದಕವಸ್ತುವನ್ನು ಟ್ರಕ್‌ನಲ್ಲಿ ಸಾಗಿಸುತ್ತಿದ್ದದ್ದು ಬೆಳಕಿಗೆ ಬಂದಿದೆ. ಚಾಲಕ ಟ್ರಕ್‌ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ನೈಸರ್ಗಿಕ ರಬ್ಬರ್ ಹಾಳೆಗಳ ಅಡಿಯಲ್ಲಿ ಅಡಗಿಸಿ ಇಡಲಾಗಿದ್ದ 4,725 ಕೆ.ಜಿಗೂ ಅಧಿಕ ಪ್ರಮಾಣದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಶ್ಲಾಘಿಸಿದ್ದಾರೆ.