ವಸತಿ ಸಚಿವರಿಂದ 48 ಕೋಟಿ ರೂ. ವೆಚ್ಚದ ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ

ದಿಗಂತ ವರದಿ ಕಲಬುರಗಿ:

ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಸೇಡಂ-ಚಿಂಚೋಳಿ ರಸ್ತೆಯಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿ 12 ಎಕರೆ ಪ್ರದೇಶದಲ್ಲಿ 48 ಕೋಟಿ ರೂ. ವೆಚ್ಚದಲ್ಲಿ ಜಿ+2 ಮಾದರಿಯ 750 ಮನೆಗಳ‌ ನಿರ್ಮಾಣದ ಕಾಮಗಾರಿಗೆ ರಾಜ್ಯದ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಅವರು ಶಂಕುಸ್ಥಾಪನೆ ನೆರವೇರಿಸಿದ‌ರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಮುಂದಿನ ಆರು ತಿಂಗಳಲ್ಲಿ ಗುಣಮಟ್ಟದ ಮನೆ ಇಲ್ಲಿ ನಿರ್ಮಾಣವಾಗಬೇಕು. ರಸ್ತೆಗೆ ಹೊಂದಿಕೊಂಡೆ ಈ ಪ್ರದೇಶವಿರುವುದರಿಂದ ರಸ್ತೆಕ್ಕಿಂತ ಎರಡೂವರೆ ಅಡಿ ಮೇಲೆ ಬೇಸ್ ಮೆಂಟ್ ಇರಬೇಕು ಎಮದು ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಡಾ.ಉಮೇಶ ಜಾಧವ, ಶಾಸಕ ಡಾ.ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮೂಡ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸದಸ್ಯ ನಾಗರಾಜ ಎಂ.ಬಿರಾದರ, ಸೇಡಂ‌ ಪುರಸಭೆ ಅಧ್ಯಕ್ಷೆ ಚೆನ್ನಮ್ಮ ಬಿ. ಪಾಟೀಲ, ಉಪಾಧ್ಯಕ್ಷ ಶಿವಾನಂದ ಸ್ವಾಮಿ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಆಯುಕ್ತ ಬಿ.ವೆಂಕಟೇಶ, ತಾಂತ್ರಿಕ ನಿರ್ದೇಶಕ ಬಿ.ಎಂ.ಕಪನಿಗೌಡ, ತಹಶೀಲ್ದಾರ ಬಸವರಾಜ ಬೆಣ್ಣೆಶಿರೂರ, ಸೇಡಂ ಪುರಸಭೆ ಮುಖ್ಯಾಧಿಕಾರಿ ಆರ್.ಪ್ರಹ್ಲಾದ್, ಎಇಇ ಮಲ್ಕಿಕಾರ್ಜುನ, ಇಂಜಿನೀಯರ್ ಲಕ್ಷ್ಮೀಕಾಂತ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!