October 15, 2026
Thursday, October 15, 2026
spot_img

ಹಾರ್ಮುಜ್ ಜಲಸಂಧಿ ತೆರೆಯಲು 48 ಗಂಟೆಗಳ ಡೆಡ್ ಲೈನ್: ಇರಾನ್ ಗೆ ಭೀಕರ ದಾಳಿಯ ಎಚ್ಚರಿಕೆ ಕೊಟ್ಟ ಟ್ರಂಪ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಹಿಡಿತದಲ್ಲಿರುವ ಹಾರ್ಮುಜ್ ಜಲಸಂಧಿಯನ್ನುತೆರೆಯಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹರಸಾಹಸ ಪಡುತ್ತಿದ್ದು, ಇದೀಗ ಮತ್ತೊಮ್ಮೆ 48 ಗಂಟೆಗಳ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಟ್ರಂಪ್ ,ಇರಾನ್‌ಗೆ ನೀಡಿದ್ದ ಗಡುವು 48 ಗಂಟೆಗಳಲ್ಲಿ ಮುಕ್ತಾಯಗೊಳ್ಳುತ್ತಿದ್ದು, ಇದರ ಬೆನ್ನಲ್ಲೇ ಇರಾನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇರಾನ್‌ಗೆ ಜಲಸಂಧಿಯನ್ನು ತೆರೆಯಲು10 ದಿನಗಳ ಅಂತಿಮ ಗಡುವು ನೀಡಿದ್ದೆ. ಆದರೆ ಸಮಯ ಉರುಳುತ್ತಿದ್ದು, ಇನ್ನೂ ಕೇವಲ 48 ಗಂಟೆಗಳು ಮಾತ್ರ ಉಳಿದಿವೆ. ಈ ಸಮಯದಲ್ಲಿ, ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕು. ಇಲ್ಲದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಯಾಗುತ್ತದೆ ಎಂದು ಹೇಳಿದ್ದಾರೆ.

Must Read