Wednesday, August 17, 2022

Latest Posts

ಕೊಡಗು ಜಿಲ್ಲೆಯಲ್ಲಿ 48 ಹೊಸ ಕೋವಿಡ್ ಪ್ರಕರಣ ಪತ್ತೆ, ಒಂದು ಸಾವು

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಬುಧವಾರ 48 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಅಲ್ಲದೆ ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 17, ಸೋಮವಾರಪೇಟೆ ತಾಲೂಕಿನಲ್ಲಿ 14 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 17 ಹೊಸ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 47,368 ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 176 ಮಂದಿ ಗುಣಮುಖರಾಗುವುದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 46,075ರಷ್ಟಾಗಿದೆ. ಅಲ್ಲದೆ ಇದುವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 446ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ 847ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 119 ಹಾಗೂ ಪಾಸಿಟಿವಿಟಿ ದರ ಶೇ. 3.18ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!