ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 498 ಮಂದಿಯಲ್ಲಿ ಕೊರೋನಾ ಸೋಂಕು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 498 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಸಾವಿನ ಸಂಖ್ಯೆ ಅಧಿಕ ಪ್ರಮಾಣದಲ್ಲೇ ಇದ್ದು, ಗುರುವಾರ 15 ಮಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. 702 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಗುರುವಾರ ಪಾಸಿಟಿವಿಟಿ ಪ್ರಮಾಣ ಶೇ. 5.59 ದಾಖಲಾಗಿದೆ. ಜಿಲ್ಲೆಯಲ್ಲಿ ಈಗ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 90659 ಏರಿಕೆಯಾಗಿದೆ. ಈ ಪೈಕಿ 6591 ಸಕ್ರಿಯ ಪ್ರಕರಣಗಳು. 82960 ಮಂದಿ ಗುಣಮುಖರಾಗಿದ್ದಾರೆ. 1108 ಮಂದಿ ಮೃತಪಟ್ಟಿದ್ದಾರೆ.
ಗುರುವಾರ ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ಯಾವುದೇ ಹೊಸ ಪ್ರಕರಣ, ಸಾವು ವರದಿಯಾಗಿಲ್ಲ. ಗುರುವಾರ ನಾಲ್ಕು ಮಂದಿ ಈ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 27 ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇದುವರೆಗೆ 73941 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 9015817 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss