ಕಾಂಗ್ರೆಸ್​ ಅಭ್ಯರ್ಥಿಗಳ 4ನೇ ಪಟ್ಟಿ ಇಂದು ಪ್ರಕಟ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇಂದು ಕಾಂಗ್ರೆಸ್‌ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಹತ್ವದ ಚರ್ಚೆ ನಡೆದಿದ್ದು, ನಾಲ್ಕನೇ ಪಟ್ಟಿ ಕುರಿತು ಸಮಾಲೋಚನೆ ನಡೆದಿದೆ ಎಂದು ತಿಳಿದುಬಂದಿದೆ.

ಬಾಕಿಯಿರುವ 15 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಉಳಿದ ಕ್ಷೇತ್ರಗಳಿಗೆ ಮೌಖಿಕವಾಗಿ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!