ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಪುವಾ ನ್ಯೂಗಿನಿಯಾದಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅಮೆರಿಕಾ ಭೂಗರ್ಭ ಮಾಪನ ಅಧಿಕಾರಿಗಳು, ಇಲ್ಲಿನ ಕಿಂಬೆಯಿಂದ 70 ಕಿ.ಮೀ ದೂರದಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 4:30ಕ್ಕೆ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.
ಕಂಪನ ಬಿಂದುವನ್ನು 111.6 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಅಲ್ಲಿನ ಆಡಳಿತ ಸ್ಪಷ್ಟಪಡಿಸಿದೆ.