ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾಸ್ ಏಂಜಲೀಸ್ನ ಉತ್ತರಕ್ಕೆ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅಮೆರಿಕ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು, ಸ್ತಳೀಯ ಕಾಲಮಾನದ ಪ್ರಕಾರ ಭಾನುವಾರ ಮಧ್ಯಾಹ್ನ 2:42ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಕಂಪನ ಬಿಂದುವನ್ನು ಓಜೈ ನಗರದ ಆಗ್ನೇಯಕ್ಕೆ ನಾಲ್ಕು ಮೈಲುಗಳಷ್ಟು ದೂರದಲ್ಲಿ ಭೂಮಿಯ ಮೇಲ್ಮೆಯಿಂದ 4.8 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.