ಲಖ್ನೋದಲ್ಲಿ 5.2 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶನಿವಾರ ಉತ್ತರ ಪ್ರದೇಶದ ಲಕ್ನೋದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಉತ್ತರ ಪ್ರದೇಶದ ಲಕ್ನೋದಿಂದ 139 ಕಿಮೀ ಈಶಾನ್ಯ ಭಾಗದಲ್ಲಿ ರಾತ್ರಿ 1.12 ರ ಸುಮಾರಿಗೆ ಭೂಕಂಪ ಸಂಭವಿಸಿದೆ.

ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

“ಶನಿವಾರ 5.2 ತೀವ್ರತೆಯ ಭೂಕಂಪ ಲಖ್ನೋದಿಂದ ಈಶಾನ್ಯದಲ್ಲಿ 139 ಕಿಮೀ ದೂರದಲ್ಲಿ ಸಂಭವಿಸಿದೆ. ಭೂಕಂಪ ಕೇಂದ್ರವು ಸುಮಾರು 82 ಕೀಮೀ ಆಳದಲ್ಲಿ ಪತ್ತೆಯಾಗಿದೆ” ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವೀಟ್‌ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!