ಟೋಕಿಯೋದಲ್ಲಿ 5.4 ತೀವ್ರತೆಯ ಭೂಕಂಪ: ಹಲವರಿಗೆ ಗಾಯ, ಕಟ್ಟಡಗಳಿಗೆ ಹಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಧಾನಿ ಟೋಕಿಯೊ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಭೂಕಂಪ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಕಟ್ಟಡಗಳಿಗೆ ಸಣ್ಣ ಪ್ರಮಾಣದ ಹಾನಿ ಉಂಟಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಕಂಪನದ ಕೇಂದ್ರಬಿಂದು ಟೋಕಿಯೊದ ಆಗ್ನೇಯದಲ್ಲಿರುವ ಚಿಬಾ ಪ್ರಾಂತ್ಯದಲ್ಲಿ ಪತ್ತೆಯಾಗಿದೆ ಎಂದು ಜಪಾನ್​ನ ಭೂಕಂಪಶಾಸ್ತ್ರ ಅಧ್ಯಯನ ಕೇಂದ್ರ ತಿಳಿಸಿದೆ.

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿನ ಕೆಲವು ರೈಲು ಸೇವೆ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!