ನನ್ನ ಬಳಿ ಇರುವ ದಾಖಲೆ ಏನಾದ್ರು ಬಿಟ್ಟರೆ 5-6 ಸಚಿವರ ರಾಜೀನಾಮೆ ಫಿಕ್ಸ್: HDK ಹೊಸ ಬಾಂಬ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ. ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳುವ ಮೂಲಕ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಈಗ ಅದೇ ಆಗುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಶಾಪ ಹಾಕಿದರು.

ಸರ್ಕಾರ ನನ್ನನ್ನು ಜೈಲಿಗೆ ಕಳುಹಿಸಲು ಪ್ರಯತ್ನಿಸಿತು. 12 ವರ್ಷ ಹಳೆಯ ಪ್ರಕರಣ ಜೈಲಿಗೆ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!