Wednesday, August 10, 2022

Latest Posts

ಪತಿಯ ಕಣ್ಣೆದುರೇ ಪತ್ನಿಯ ಮೇಲೆ ಅತ್ಯಾಚಾರವೆಸಗಿದ ಐವರು ಕಾಮುಕರು!!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಹಿಳೆಯನ್ನು ಆಕೆಯ ಪತಿಯ ಕಣ್ಣೆದುರೇ 5 ಜನ ಸಾಮೂಹಿಕ ಅತ್ಯಾಚಾರವೆಸಗಿರುವ ದುರ್ಘಟನೆ ರಾಜಸ್ಥಾನದ ಬನಾರ್ ನಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆಯ ಮಾಜಿ ಪತಿ ಮತ್ತು ಆತನ 4 ಸಹಾಯಕರು ಸೇರಿ ಅತ್ಯಾಚಾರ ಎಸಗಿರುವುದಾಗಿ ಎಸ್. ಪಿ. ವಿನೀತ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.

ಸಂತ್ರಸ್ಥ ದಂಪತಿ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಮರಳುತ್ತಿದ್ದಾಗ, ಆರೋಪಿಗಳು ಅವರನ್ನು ತಡೆದು ಹತ್ತಿರದ ಹೊಲಕ್ಕೆ ಕರೆದೊಯ್ದರು. ಅಲ್ಲಿ ಮಹಿಳೆಯ ಪತಿಯನ್ನು ಕಟ್ಟಿ ಹಾಕಿ, ಆತನ ಕಣ್ಣೆದುರೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಸಂತ್ರಸ್ಥ ಮಹಿಳೆ ತನ್ನ ಪತಿಯೊಂದಿಗೆ ಸದರ್ ಪೊಲೀಸ್ ಠಾಣೆಗೆ ತೆರಳಿ ಐವರು ಆರೋಪಿಗಳ ವಿರುದ್ಧ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,  ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss