ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಐವರು ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಿಹಾರದ ಅರ್ರಾ ಜಿಲ್ಲೆಯಲ್ಲಿ ಕೆಲವು ಯುವಕರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ  ಐವರನ್ನು ಬಂಧಿಸಲಾಗಿದೆ.
ಭೋಜ್‌ಪುರದ ಚಾಂಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಬ್ಯಾಡ್ಮಿಂಟನ್ ಆಟದ ನಂತರ ಗುಂಪು ತಮ್ಮ ವಿಜಯೋತ್ಸವವನ್ನು ಆಚರಿಸುವಾಗ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದರು. ನೀಲಿ ಬಣ್ಣದ ಬಟ್ಟೆ ತೊಟ್ಟ ವ್ಯಕ್ತಿಯೊಬ್ಬರು ವಿಡಿಯೋ ಮಾಡುತ್ತಿರುವುದನ್ನು ವಿಡಿಯೋ ತೋರಿಸುತ್ತದೆ.
ವಿಜಯೋತ್ಸವದ ಮೆರವಣಿಗೆಯಲ್ಲಿ ಇಬ್ಬರು ಟ್ರೋಫಿಯನ್ನು ಕೈಯಲ್ಲಿ ಹಿಡಿದಿರುವುದನ್ನು ಕಾಣಬಹುದು. ಯುವಕರು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸುತ್ತಿರುವುದನ್ನು ಕಾಣಬಹುದು.
ಇತರೆ ಆರೋಪಿಗಳ ಪತ್ತೆಗೆ ಪೊಲೀಸರು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಬಂಧಿತ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!