ವಿಧಾನಸಭೆಯಲ್ಲಿ ಬೆಂಗಳೂರು ಅರಮನೆ ವಿಧೇಯಕ ಸೇರಿ 5 ಮಸೂದೆಗಳ ಮಂಡನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಬಳ್ಳಾರಿ ಮತ್ತು ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಜಾಗ ಸ್ವಾಧೀನಕ್ಕೆ ಬದಲಾಗಿ ಮೈಸೂರು ರಾಜ ಮನೆತದ ವಾರಸುದಾರರಿಗೆ ರೂ.3014 ಕೋಟಿ ವರ್ಗಾವಣೆ ಅಭಿವೃದ್ಧಿ ಹಕ್ಕುಗಳನ್ನು ಪರಿಹಾರ ನೀಡಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ಮಸೂದೆ ಮಹತ್ವ ಪಡೆದುಕೊಂಡಿದೆ.

ಸುಪ್ರೀಂಕೋರ್ಟ್ ಆದೇಶ ಪಾಲೆ ಮಾಡಿದರೆ ಸರ್ಕಾರಕ್ಕೆ ಭಾರೀ ನಷ್ಟ ಉಂಟಾಗಲಿದೆ ಎಂದು ಸರ್ಕಾರ ನಿರ್ಧರಿಸಿದ್ದು, ಹೀಗಾಗಿಯೇ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಆದರೆ, ಸುಪ್ರೀಂಕೋರ್ಟ್ ಅದನ್ನು ಒಪ್ಪದೆ ಟಿಡಿಆರ್ ಪರಿಹಾರ ನೀಡುವ ಆದೇಶ ಪಾಲಿಸುವಂತೆ ಸೂಚನೆ ನೀಡಿತ್ತು. ಅದರ ನಡುವೆಯೂ ಇದೀಗ ಸುಗ್ರೀವಾಜ್ಞೆಗೆ ಕಾನೂನು ರೂಪ ನೀಡಲು ಸರ್ಕಾರ ಮುಂದಾಗಿದ್ದು, ಬೆಂಗಳೂರು ಅರಮನೆ ವಿಧೇಯಕ 2025 ಅನ್ನು ಮಂಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ನಿನ್ನೆ ವಿಧಾನಮಂಡಲದಲ್ಲಿ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ವನ್ನು ಮಂಡನೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!