ಬಳ್ಳಾರಿಯಲ್ಲಿ 5 ಕೋಟಿ ಹಣ, 3 ಕೆಜಿ ಬಂಗಾರ, ಮೂಟೆಗಟ್ಟಲೆ ಬೆಳ್ಳಿ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಹಣ ಸಾಗಾಟ ದಿನೇ ದಿನೇ ಪತ್ತೆಯಾಗುತ್ತಿದ್ದು, ಬಳ್ಳಾರಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆಯಿಂದ ಬ್ರೂಸ್‌ಪೇಟೆ ಮನೆ ಮೇಲೆ ದಾಳಿ ನಡೆಸಿದ ದಾಖಲೆಗಳಿಲ್ಲದ 5.6 ಕೋಟಿ ರೂ. ನಗದು ಹಾಗೂ 3 ಕೆಜಿ ಬಂಗಾರ, 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದು, ನಗರದ ಬ್ರೂಸ್ ಪೇಟೆ ಠಾಣೆ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೇ ಹಣವನ್ನ ಕಾರಿನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಎಲ್ಲ ವಸ್ತುಗಳನ್ನು ಮಹಜರು ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. 98 ಕೆಪಿ ಆಯಕ್ಟ್ ಅಡಿ ಪ್ರಕರಣವನ್ನು ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಇದನ್ನು ಹಸ್ತಾಂತರ ಮಾಡಲಾಗುವುದು. ಈ ಪ್ರಕರಣದಲ್ಲಿ ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಮನೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!