ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

5 ದಿನ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್​​

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಬಳ್ಳಾರಿ:

ಕೊರೋನಾ ಎರಡನೇ ಅಲೆ ಅತ್ಯಂತ ವೇಗವಾಗಿ‌ ಹರಡುತ್ತಿರುವ ಹಿನ್ನೆಲೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳನ್ನು ಮೇ19ರಿಂದ ಐದು ದಿನಗಳ‌ ಕಾಲ‌ ಸಂಪೂರ್ಣವಾಗಿ ಲಾಕ್​ಡೌನ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪವನ್​ ಕುಮಾರ ಮಾಲಪಾಟಿ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ನಾಳೆ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿ ಸೇರಿದಂತೆ ಇನ್ನಿತರೆ ಸಾಮಾನುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, ಮೇ.19 ರಿಂದ 24 ರ ಬೆಳಗ್ಗೆ 6 ರವರೆಗೆ ಸಂಪೂರ್ಣ ಲಾಕ್​ಡೌನ್ ಜಾರಿಯಲ್ಲಿರಲಿದೆ. ಅನಗತ್ಯವಾಗಿ ಓಡಾಡುವವರಿಗೆ ದಂಡ ವಿಧಿಸಲಾಗುವುದು ಎಚ್ಚರಿಕೆ ನೀಡಿದರು.5 ದಿನ ಬಳ್ಳಾರಿ, ವಿಜಯನಗರ ಜಿಲ್ಲೆಗಳು ಸಂಪೂರ್ಣ ಲಾಕ್​ಡೌನ್, ಅಂತಾರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸರಕು ಸಾಗಣೆ ವಾಹನ ಸೇರಿದಂತೆ ವೈದ್ಯಕೀಯ ಸೇವೆಗಳಿಗೆ ಮಾತ್ರ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಹಾಲು ಮತ್ತು ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದು ಕೂಡ ತಳ್ಳುವ ಗಾಡಿ ಅಥವಾ ಹಾಪ್ ಕಾಮ್ಸ್ ಸೇವೆಯಿಂದ ತರಕಾರಿಗಳ ಪೂರೈಕೆಗೆ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಎಸ್ಪಿ ಸೈದಲು ಅಡಾವತ್ ಮಾತನಾಡಿ, ಗಡಿಭಾಗದಲ್ಲಿ ಸಂಪೂರ್ಣವಾಗಿ ಕಟ್ಟೆಚ್ಚರ ವಹಿಸಲಾಗಿದೆ. ಲಾಕ್​ಡೌನ್ ಸಮಯದಲ್ಲಿ ಅನಗತ್ಯವಾಗಿ ಹೊರಬಂದ್ರೆ ವಾಹನ ಸೀಜ್ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss