ಅಮೆರಿಕದ ಬಾರ್‌ನಲ್ಲಿ ಗುಂಡಿನ ದಾಳಿ: ಐವರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿನ ಬಾರ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಕ್ಯಾಲಿಫೋರ್ನಿಯಾದ ಆರೆಂಜ್ ಕೌಂಟಿಯ ಬೈಕರ್ಸ್ ಬಾರ್‌ನಲ್ಲಿ ಮುಸುಕುದಾರಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ.
ಈ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ದಾಳಿ ನಡೆಯುವ ವೇಳೆ ಅದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿಗಳು ಸಹ ಗುಂಡಿನ ದಾಳಿ ನಡೆಸಿದ್ದು, ಮುಸುಕುಧಾರಿಯು ಮೃತಪಟ್ಟಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ತನಿಖೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!