Thursday, June 1, 2023

Latest Posts

ಟ್ರಕ್ ರೂಪದಲ್ಲಿ ಬಂದ ಜವರಾಯ: ಐವರು ಟೆಂಪೋ ಪ್ರಯಾಣಿಕರ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಟ್ರಕ್‌ವೊಂದು ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬುಧವಾರದಂದು ರಾತ್ರಿ ಈ ದುರಂತ ಸಂಭವಿಸಿದೆ. ಕುಟುಂಬದ ಕಾರ್ಯಕ್ರಮವೊಂದಕ್ಕೆ ತೆರಳಿ ಅಹಿರಾನ್‌ಪುರಕ್ಕೆ ಟೆಂಪೋದಲ್ಲಿ ಹಿಂತಿರುಗುತ್ತಿದ್ದಾಗ ರಾಂಗ್‌ ಸೈಡ್‌ನಿಂದ ಬಂದ ಟ್ರಕ್‌ ಡಿಕ್ಕಿ ಹೊಡೆದಿದೆ.

ಗಾಯಗೊಂಡವರನ್ನು ಭಗವಾನ್ ಪ್ರಸಾದ್ (40), ಅನಿಲ್ (15), ಖುಷ್ಭು (35), ಹರೀಶ್ (45) ಮತ್ತು ಜೈ ಕರಣ್ (40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಬಳಿಕ ಲಾರಿ ಚಾಲಕ ನಾಪತ್ತೆಯಾಗಿದ್ದಾನೆ. ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!