ಹೊಸದಿಗಂತ ಡಿಜಿಟಲ್ ಡೆಸ್ಕ್:
ವಧುವಿನ ಕುಟುಂಬದವರನ್ನು ಕರೆದೊಯ್ಯುತ್ತಿದ್ದ ಟ್ರಕ್ ಒಂದು ನದಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಐವರು ಮೃತಪಟ್ಟಿರುವ ದಾರುಣ ಘಟನೆ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ನಡೆದಿದೆ.
ಕಳೆದ ರಾತ್ರಿ ಟ್ರಕ್ ಬುಹಾರಾ ಗ್ರಾಮವನ್ನು ತಲುಪಿದಾಗ ಆಯ ತಪ್ಪಿಗೆ ನದಿಗೆ ಬಿದ್ದಿದೆ. ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತರು ಗ್ವಾಲಿಯರ್‌ನ ಬಿಲ್ಹೇಟಿ ಗ್ರಾಮದ ನಿವಾಸಿಗಳಾಗಿದ್ದು, ಮದುವೆಗಾಗಿ ಟಿಕಮ್‌ಗಢಕ್ಕೆ ತೆರಳಿದ್ದರು.
ಘಟನೆಯಲ್ಲಿ 65 ವರ್ಷದ ಮಹಿಳೆ, 18 ವರ್ಷದ ಪುರುಷ ಹಾಗೂ ಎರಡು-ಮೂರು ವರ್ಷದೊಳಗಿನ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಇಪ್ಪತ್ನಾಲ್ಕು ಜನರು ಗಾಯಗೊಂಡಿದ್ದಾರೆ ಮತ್ತು ಅಪಘಾತದ ನಂತರ ಹಲವಾರು ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.