ಮೆರವಣಿಗೆ ವೇಳೆ ವಾಹನಕ್ಕೆ ಹೈಟೆನ್ಷನ್ ವಿದ್ಯುತ್ ವೈರ್‌ ಸ್ಪರ್ಶಿಸಿ ಐವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಐವರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.
ಮೆರವಣಿಗೆಯ ಗಾಡಿಗೆ ಅಳವಡಿಸಲಾಗಿದ್ದ ಕಬ್ಬಿಣದ ರಾಡ್‌ಗೆ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಅವಘಡ ಸಂಭವಿಸಿದೆ. ಐವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಚಿಕಿತ್ಸೆಗಾಗಿ ಲಕ್ನೋಗೆ ಕಳುಹಿಸಲ್ಪಟ್ಟ ಮತ್ತೊಬ್ಬ ವ್ಯಕ್ತಿ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಹ್ರೈಚ್‌ನಲ್ಲಿ ನಡೆದ ಮೆರವಣಿಗೆಯಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಇದರೊಂದಿಗೆ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೂಡಲೇ ಸ್ಥಳಕ್ಕೆ ಆಗಮಿಸುವಂತೆ ಸೂಚನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!