ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಸಸಾರಾಮ್ ಪಟ್ಟಣದಲ್ಲಿ ಶನಿವಾರ ಸಂಜೆ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬಾಂಬ್ ಸ್ಫೋಟದಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೋರೆನ್ಸಿಕ್ ತಂಡವು ಸ್ಥಳಕ್ಕೆ ಧಾವಿಸಿದೆ ಪರಿಶೀಲನೆ ನಡೆಸುತ್ತಿದೆ.
“ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ನಾವು ಇದೀಗ ಎಲ್ಲಾ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಸಸಾರಮ್ ಡಿಎಂ ಧರ್ಮೇಂದ್ರ ಕುಮಾರ್ ಸ್ಪಷ್ಟಪಡಿಸಿದರು. ಬಿಹಾರ ಪೊಲೀಸರ ಪ್ರಕಾರ, ರೋಹ್ತಾಸ್‌ನ ಸಸಾರಾಮ್‌ನಲ್ಲಿ ಬಾಂಬ್ ಸ್ಫೋಟದ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು, ನಂತರ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಈ ವಿಷಯವನ್ನು ತನಿಖೆ ಮಾಡಲು ಸ್ಥಳಕ್ಕೆ ತಲುಪಿತು.
“ಸ್ಫೋಟವು ಗುಡಿಸಲುಗಳಲ್ಲಿ ವರದಿಯಾಗಿದೆ ಮತ್ತು ಆ ಪ್ರದೇಶದಿಂದ ಒಂದು ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕವಾಗಿ ಇದು ಕೋಮು ಘಟನೆಯಲ್ಲ ಎಂಬುದನ್ನು ಪೊಲೀಸರು ಕಂಡುಬಂದಿದೆ”.
ಬಿಹಾರದಲ್ಲಿ ಶನಿವಾರ ಮತ್ತೆ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಎರಡು ಗುಂಪುಗಳ ನಡುವಿನ ಮಾರಾಮಾರಿಯಲ್ಲಿ ಮೂರು ಜನರು ಗುಂಡಿನ ದಾಳಿಗೆ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಘರ್ಷಣೆಯ ನಂತರ 144 ಸೆಕ್ಷನ್ ಜಾರಿಗೊಳಿಸಿದೆ. ನಿಷೇಧಾಜ್ಞೆ ಹೇರಿದ ಕಾರಣ ಬಿಹಾರದ ರೋಹ್ತಾಸ್‌ನಲ್ಲಿರುವ ಸಸಾರಾಮ್‌ಗೆ ಶಾ ಅವರ ಭೇಟಿಯನ್ನು ರದ್ದುಗೊಳಿಸಲಾಗಿದೆ.
ರಾಜ್ಯದ ಕೆಲವು ಭಾಗಗಳಲ್ಲಿ ರಾಮನವಮಿ ಆಚರಣೆಯ ನಂತರ ಗುಂಪುಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಒಟ್ಟು 45 ಜನರನ್ನು ಬಂಧಿಸಲಾಗಿದೆ. ಇದರಲ್ಲಿ ಸಸಾರಂನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 18 ಮಂದಿ ಸೇರಿದ್ದಾರೆ.